ಭರತಖಂಡದ ನೀಲಗಗನವ ತಿಮಿರ ಮುಸುಗಿರಲು
ಭರತಖಂಡದ ನೀಲಗಗನವ ತಿಮಿರ ಮುಸುಗಿರಲು
ಭಾರತೀಯರು ತಮ್ಮ ಧ್ಯೇಯವ ಮರೆತು ಮಲಗಿರಲು
ಪರಮಹಂಸನೆ, ಉದಯ ಸೂರ್ಯನ ತೆರದಿ ರಂಜಿಸಿದೆ
ಹೃದಯನಭದಜ್ಞಾನ ತಿಮಿರವನಿರದೆ ಭಂಜಿಸಿದೆ
ಸರ್ವಮಾರ್ಗಗಳೊಂದೆನಿಲಯಕೆ ಪೋಪುವೆಂಬುದನು
ಯೋಗವಿದ್ಯಯೊಳರಿತು ಮಾನವ ಕುಲಕೆ ಭೋದಿಸಿದೆ
ಕ್ರೈಸ್ತ ಹಿಂದು ಮಹಮದೀಯರೆ ಬೌದ್ಧ ಮೊದಲಾದ
ಮತಗಳಾತ್ಮವದೊಂದೆ ಎಂಬುದ ತಿಳುಹಿ ಪಾಲಿಸಿದೆ.
ಭರತಖಂಡದ ನೀಲಗಗನವ ತಿಮಿರ ಮುಸುಗಿರಲು
ಕ್ರಿಸ್ತ ಮಹಮದ ರಾಮ ಕೃಷ್ಣ ಜೊರಾಸ್ತ ಗೌತಮರು
ದಿವ್ಯ ವೇದ ಕೊರಾನು ಬೈಬಲು ತಲ್ಮಣಾದಿಗಳು
ಗುಡಿಯು ಚರ್ಚು ಮಸೀದಿ ಆಶ್ರಮ ಅಗ್ನಿಪೂಜೆಗಳು
ಕಾಶಿ ಮೆಕ್ಕಗಳೆಲ್ಲ ನಿನ್ನೊಳಗೈಕ್ಯವಾಗಿಹವು
ಭರತಖಂಡದ ನೀಲಗಗನವ ತಿಮಿರ ಮುಸುಗಿರಲು
ದಕ್ಷಿಣೇಶ್ವರ ದೇವನಿಲಯದ ಪರಮಯೋಗೀಂದ್ರ
ಶ್ರೀ ವಿವೇಕಾನಂದ ಪೂಜಿತನಾತ್ಮ ಭಾವಿತನೆ
ಲೋಕಜೀವರಿಗಾತ್ಮಶಕ್ತಿಯ ನೀಡಿ ಕಾಪಾಡು
ನೆನೆವರೆಲ್ಲರ ಹೃದಯವಾಗಲಿ ನಿನ್ನ ನೆಲೆವೀಡು
ಭರತಖಂಡದ ನೀಲಗಗನವ ತಿಮಿರ ಮುಸುಗಿರಲು
ದಕ್ಷಿಣೇಶ್ವರ ದೇವನಿಲಯದ ಪರಮಯೋಗೀಂದ್ರ
ಶ್ರೀ ವಿವೇಕಾನಂದ ಪೂಜಿತನಾತ್ಮ ಭಾವಿತನೆ
Comments
Post a Comment